Keep your meals small, O’brother, keep it

Akkamahadevi · 12th century · from the Kannada original

Original

ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ.ಆಹಾರದಿಂದ ವ್ಯಾಧಿ ಹಬ್ಬಿ ಬಲಿವುದಯ್ಯಾ. ಆಹಾರದಿಂ ನಿದ್ರೆ, ನಿದ್ರೆಯಿಂ ತಾಮಸ, ಅಜ್ಞಾನ, ಮೈಮರಹು,ಅಜ್ಞಾನದಿಂ ಕಾಮವಿಕಾರ ಹೆಚ್ಚಿ, ಕಾಯವಿಕಾರ, ಮನೋವಿಕಾರ, ಇಂದ್ರಿಯವಿಕಾರ, ಭಾವವಿಕಾರ, ವಾಯುವಿಕಾರವನುಂಟುಮಾಡಿ, ಸೃಷ್ಟಿಗೆ ತಹುದಾದ ಕಾರಣ ಕಾಯದ ಅತಿಪೋಷಣ ಬೇಡ.ಅತಿ ಪೋಷಣೆ ಮೃತ್ಯುವೆಂದುದು.ಜಪ ತಪ ಧ್ಯಾನ ಧಾರಣ ಪೂಜೆಗೆ ಸೂಕ್ಷ್ಮದಿಂ ತನುಮಾತ್ರವಿದ್ದರೆ ಸಾಲದೆ ತನುವ ಪೋಷಿಸುವ ಆಸೆ ಯತಿತ್ವಕ್ಕೆ ವಿಫ್ಸ್ನವೆಂದುದು.ತನು ಪೋಷಣೆಯಿಂದ ತಾಮಸ ಹೆಚ್ಚಿ, ಅಜ್ಞಾನದಿಂ ವಿರಕ್ತಿ ಹಾನಿ, ಅರಿವು ನಷ್ಟ, ಪರವು ದೂರ, ನಿರಕೆ ನಿಲವಿಲ್ಲದ ಕಾರಣ.ಚೆನ್ನಮಲ್ಲಿಕಾರ್ಜುನನೊಲಿಸ ಬಂದ ಕಾಯವ ಕೆಡಿಸದೆ ಉಳಿಸಿಕೊಳ್ಳಿರಯ್ಯಾ

Translation

Keep your meals small, O’brother, keep it smallToo much food leads to diseases, too much food causes drowsiness, drowsiness causes lethargy, laziness & ignorance.Ignorance leads to sexual deviancy & distortion of body, mind, emotions & senses. Therefore do not indulge in excessive eatingExcessive eating is nothing but killing oneself.Spiritual advances through japa, tapa, dhyana are hindered with these excesses.These excesses lead to depravity of the mind & body, unsatiable desires, loss of presence of mind & disorder everywhere.O’ Chenna Mallikarjuna, grant wisdom & protect your devotees

Did this poetry & its translation speak to you?

Tell Krishna what you thought →

← All translations