I dress up for my Linga, I
Akkamahadevi · 12th century · from the Kannada original
Original
ಉಡುವೆ ನಾನು ಲಿಂಗಕ್ಕೆಂದು, ತೊಡುವೆ ನಾನು ಲಿಂಗಕ್ಕೆಂದು, ಮಾಡುವೆ ನಾನು ಲಿಂಗಕ್ಕೆಂದು, ನೋಡುವೆ ನಾನು ಲಿಂಗಕ್ಕೆಂದು,ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ.ಮಾಡಿಯೂ ಮಾಡದಂತಿಪ್ಪೆ ನೋಡಾ.ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಡನೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವಾ?
Translation
I dress up for my Linga, I wear ornaments for my LingaI act through my Linga, I see through my LingaI am One with my Linga; inside & outI am merged wholly within my Channa MallikarjunaTherefore, I act; yet I don’t actHow can I explain it further?
Did this poetry & its translation speak to you?
